ಜೂ. ೧೯ಃ ಪದಗ್ರಹಣ ಸಮಾರಂಭ


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ೨೦೨೨-೨೫ರ ಸಾಲಿನ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭವನ್ನು *ಜೂ.19ರ ಭಾನುವಾರ ಬೆಳಿಗ್ಗೆ 10.30ಕ್ಕೆ ಆರ್ ಟಿಓ  ರಸ್ತೆಯ ಸರ್ಕಾರಿ ನೌಕರರ ಭವನ* ದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾರಂಭವನ್ನು ಶಾಸಕ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದು, ನೂತನ ಕಾರ್ಯಕಾರಿ ಮಂಡಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಸವಿನೆನಪಿಗಾಗಿ ಹೊರತರಲಾದ ಸ್ಮರಣ ಸಂಚಿಕೆಯನ್ನು ಸಂಸದ ಬಿ.ವೈ.ರಾಘವೇಂದ್ರ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ, ಏಷ್ಯಾ ವಿಭಾಗದ ಸಂಚಾಲಕ ಹೆಚ್.ಬಿ. ಮದನಗೌಡ, ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧುಕಾರಿ ಡಾ. ಸೆಲ್ವಮಣಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ವಿಶೇಷ ಆಹ್ವಾನಿತರಾದ ಜಿ.ಪದ್ಮನಾಭ್ ಉಪಸ್ಥಿತರಿರಲಿದ್ದಾರೆ.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್ ವಹಿಸಲಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ, ಏಷ್ಯಾ ವಿಭಾಗ ಸಂಚಾಲಕ ಹೆಚ್.ಬಿ. ಮದನಗೌಡ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪುಂಡಲೀಕ ಭೀ. ಭಾಳೋಜಿ, ಭವಾನಿಸಿಂಗ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮು, ಸೋಮಶೇಖರ ಕೆರಗೋಡು, ಲಿಂಗಪ್ಪಚಾವಡಿ, ಇತ್ತೀಚೆಗೆ ಜಿಲ್ಲೆಯ ಪತ್ರಕರ್ತಕರಿಗಾಗಿ ಆರೋಗ್ಯ ಶಿಬಿರವನ್ನು ಯಶಸ್ವೀಯಾಗಿ ನಡೆಸಿಕೊಟ್ಟ ಮೆಟ್ರೋ ಯುನೈಟೆಡ್ ಹೆಲ್ತ್ಕೇರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಬಿ.ಸಿ.ಪೃಥ್ವಿ, ಹೃದ್ರೋಗ ತಜ್ಞ ಡಾ.ಬಿ.ಆರ್. ಮಹೇಶ್ ಮೂರ್ತಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 1೦ಗಂಟೆಯಿಂದ ನಾಡಿನ ಹೆಸರಾಂತ ಹಿಂದೂಸ್ಥಾನೀ ಗಾಯಕದ್ವಯರಾದ ನೌಷಾದ್ ಹರ್ಲಾಪುರ, ನಿಷಾದ್ ಹರ್ಲಾಪುರ ಸಂಗಡಿಗರಿಂದ ಸುಗಮ ಸಂಗೀತ, ವಚನ ಗಾಯನ ನಡೆಯಲಿದೆ.

ಮುಂದಿನ ದಿನಗಳಲ್ಲಿ ಪತ್ರಕರ್ತರಿಗಾಗಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆ, ಪತ್ರಿಕಾ ದಿನಾಚರಣೆ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿಗಳ ವಿತರಣೆ, ಸಂದರ್ಭಾನುಸಾರವಾಗಿ ಪತ್ರಕರ್ತರ ಆರೋಗ್ಯತಪಾಸಣೆ, ವಿಶೇಷವಾಗಿ ಪತ್ರಕರ್ತರ ಸೌಹಾರ್ದ ಸಹಕಾರಿ ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ರಾಜ್ಯ ಸಂಘದ ಆಶಯದಂತೆ ತಾಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾ ಸಂಘವು ಪೂರ್ಣ ಸಹಕಾರ ನೀಡಲಿದೆ.

ಮಹಾನಗರ ಪಾಲಿಕೆಯಲ್ಲಿ ಸ್ಥಾಪಿತವಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಽಯ ಸದ್ಬಳಕೆ ದೃಷ್ಟಿಯಿಂದ ಸಮಿತಿ ರಚನೆ ಜೊತೆಗೆ ತಾಲೂಕು ಕೇಂದ್ರಗಳಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಈ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು, ಪತ್ರಕರ್ತರ ಜ್ಞಾನದ ಉನ್ನತೀಕರಣಕ್ಕಾಗಿ ರಸಗ್ರಹಣ ಕಾರ್ಯಾಗಾರಗಳು, ವಿವಿಧ ಕ್ಷೇತ್ರಗಳ ಸಂಪನ್ಮೂಲ ಹಾಗೂ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸಲು ಚಿಂತಿಸಲಾಗಿದೆ.

error: Content is protected !!