ಶಿವಮೊಗ್ಗ, ಸೆಪ್ಟೆಂಬರ್ 27 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅಂಚೆ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.28 ರ ಬೆಳಿಗ್ಗೆ 10.15 ಕ್ಕೆ ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ ಹಾಗೂ ಲೋಕ್ ಅದಾಲತ್‍ನಿಂದ ಆಗುವ ಪ್ರಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಬಿತ್ತಿಪತ್ರಗಳ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್.ಎಸ್.ಎ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಅಂಚೆ ಇಲಾಖೆ ಅಧೀಕ್ಷಕ ಜಿ. ಹರೀಶ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

error: Content is protected !!