ಎರಡನೇ ಹಂತದ ಕೊರೋನಾ ನಿಯಂತ್ರಣದಲ್ಲಿ ಕಟ್ಟಡ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸಿದ ಸಹಾಯಕ್ಕಾಗಿ ಕಾರ್ಮಿಕ ಇಲಾಖೆ ಮೂಲಕ ಆಹಾರಗಳನ್ನು ನೀಡಿ ಕಟ್ಟಡ ಕಾರ್ಮಿಕರಿಗೆ ಆಸರೆಯಾಗಿರುವುದು ಸಂತಸದ ವಿಷಯ, ಕಾರ್ಮಿಕರು ಆಹಾರ ಕಿಟ್ ಗಳನ್ನು ಪಡೆದು ಇಲಾಖೆಯೊಂದಿಗೆ ಸಹಕರಿಸುವಂತೆ ಶಾಸಕ ಕೆ. ಬಿ. ಅಶೋಕ್ ನಾಯ್ಕ ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿ,ಮಲ್ಲಾಪುರ, ಆಗರದಹಳ್ಳಿ ಕ್ಯಾಂಪ್, ಚಂದನಕೆರೆ, ಮಾರಶೆಟ್ಟಿಹಳ್ಳಿ ,ಅರಬಿಳಚಿ, ಅರದೊಟ್ಲು, ಹೊಸಕೊಪ್ಪ ಗ್ರಾಮಗಳಿಗೆ ಭೇಟಿ ನೀಡಿ ಕಟ್ಟಡ ಕಾರ್ಮಿಕರ ಇಲಾಖೆಯಿಂದ ನೀಡಲಾದ ಆಹಾರ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರಕ್ಕೆ ವಿತರಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಒಳಗೊಂಡ ಆಹಾರದ ಕಿಟ್ ಗಳನ್ನು ನೀಡಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ರವರ ನೇತೃತ್ವದ ರಾಜ್ಯ ಸರ್ಕಾರವು ಕಾರ್ಮಿಕರ ಕುರಿತು ವಿಶೇಷ ರೀತಿಯ ಕಾಳಜಿಯನ್ನು ಹೊಂದಿದೆ ಎಂದರು.
ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.