“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಶಿವಮೊಗ್ಗ, ಫೆಬ್ರವರಿ 25 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಫೆಬ್ರವರಿ 29ರಂದು ಬೆಳಿಗ್ಗೆ 11ಗಂಟೆಗೆ ವಿವಿಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಐದನೇ ಘಟಿಕೋತ್ಸವ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಿದೆ.
ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ವಜುಭಾಯಿ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಸಹಕುಲಾಧಿಪತಿ ಹಾಗೂ ಕೃಷಿ ಸಚಿವ ಬಸವನಗೌಡ ಚನ್ನಬಸವನಗೌಡ ಪಾಟೀಲ್ ಅವರು ಉಪಸ್ಥಿತರಿರುವರು. ಭಾರತ ಸರ್ಕಾರದ 15ನೇ ಹಣಕಾಸು ಆಯೋಗ ಹಾಗೂ ರಾಷ್ಟ್ರೀಯ ನೀತಿ ಆಯೋಗಗಳ ಸದಸ್ಯ ಡಾ|| ರಮೇಶ್‍ಚಂದ್ ಅವರು ಘಟಿಕೋತ್ಸವ ಭಾಷಣ ಮಾಡುವರು. ಕುಲಪತಿ ಡಾ|| ಎಂ.ಕೆ.ನಾಯ್ಕ್, ಕುಲಸಚಿವರ ಡಾ|| ಎಂ.ದಿನೇಶ್‍ಕುಮಾರ್ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರು ಉಪಸ್ಥಿತರಿರುವರು.

error: Content is protected !!