ಶಿವಮೊಗ್ಗ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅತ್ತುö್ಯತ್ತಮವಾಗಿ ಶ್ರಮಿಸುತ್ತಿದೆ ಎಂದು
ಕೊಮ್ಮನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಶಿವಮೊಗ್ಗ ಪೂರ್ವ ಹಾಗೂ ದಾನಿಗಳ ನೆರವಿನಿಂದ ೪೮ ಸಾವಿರ ರೂ, ಮೌಲ್ಯದ ವಸ್ತುಗಳ ಕೊಡುಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹೆಚ್ಚಿಸಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ರೋಟರಿ ಗ್ಲೋಬಲ್ ಗ್ರಾö್ಯಂಟ್ ಮೂಲಕ ಕುಮಾರಸ್ವಾಮಿ ಅವರು ೨೦೧೯ರಲ್ಲಿ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ, ೭ ಗ್ರೀನ್ ಬೋರ್ಡ್, ಕಂಪ್ಯೂರ್ಸ್, ನಲಿ ಕಲಿ ಟೇಬಲ್ ಕುರ್ಚಿಗಳು, ಬೆಂಚುಗಳು, ಕ್ರೀಡಾ ಮತ್ತು ವಿಜ್ಞಾನ ಉಪಕರಣಗಳು, ಧ್ವನಿವರ್ಧಕಗಳನ್ನು ಕೊಡುಗೆಯಾಗಿ ನೀಡಿದ್ದರು ಎಂದರು.
ಇದೀಗ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ, ಶಾಲೆಯ ಹಳೆಯ ವಿದ್ಯಾರ್ಥಿ ಶಂಕರ್, ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಹಾಸ್ ರಾಯ್ಕರ್ ಅವರು ಶಾಲೆಯ ವಿದ್ಯಾರ್ಥಿಗಳಿಗೆ ೫೦೦ ನೋಟ್ ಪುಸ್ತಕ, ಗ್ರೀನ್ ಬೋರ್ಡ್, ೫, ೬ ಮತ್ತು ೭ನೇ ಶಾಲೆಯ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಪುಸ್ತಕ ಹಾಗೂ ಕುರ್ಚಿಗಳನ್ನು ಒಳಗೊಂಡAತೆ ೪೮ ಸಾವಿರ ರೂ. ಮೌಲ್ಯದ ವಸ್ತುಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಶಾಲೆಯ ಅಭಿವೃದ್ಧಿ ಮುಂದಾಗಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಮಾಜಿ ಸಹಾಯಕ ಗವರ್ನರ್ ಚಂದ್ರಹಾಸ್ ರಾಯ್ಕರ್ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮವಾಗಿ ತೊಡಗಿಸಿಕೊಳ್ಳಬೇಕು. ಗುರುಗಳ ಮಾರ್ಗದರ್ಶನದಿಂದ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯು ೨೦ ವರ್ಷಗಳಿಂದಲೂ ನಿರಂತರವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡುತ್ತ ಬಂದಿದೆ. ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್ ಮಾತನಾಡಿ, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶ್ರಮಿಸುತ್ತಿರುವುದು ಮಾದರಿ ಕಾರ್ಯ ಎಂದು ಅಭಿನಂದಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಕುಮಾರಸ್ವಾಮಿ, ಶ್ರೀಮತಿ, ಮುಖ್ಯಶಿಕ್ಷಕಿ ವಿನೋದ ಸಾಲಿ, ಸಹಶಿಕ್ಷಕರಾದ ಭುವನೇಂದ್ರ, ಉಮಾ ಮಹೇಶ್ವರಿ, ನಂದೀಶ್ ಉಪಸ್ಥಿತರಿದ್ದರು.