ಶಿವಮೊಗ್ಗ, ಜನವರಿ-18 : ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 0-5 ವರ್ಷದ ಒಳಗಿನ 130750 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿಯಿದ್ದು, ಅತೀ ಸೂಕ್ಷ ಪ್ರದೇಶಗಳಲ್ಲಿ, ಕೊಳಚೆ ಪ್ರದೇಶ, ಅಲೆಮಾರಿಗಳು, ಇಟ್ಟಿಗೆ ಸುಡುವ ಗೂಡುಗಳು, ಮತ್ತು ಕಟ್ಟಡ ನಿರ್ಮಾಣ ಸ್ಥಳಗಳನ್ನು ಗುರುತಿಸಿ ಹಾಗೂ ಬಸ್ಸು ನಿಲ್ದಾಣ, ರೈಲ್ವೆನಿಲ್ದಾಣಗಳು ಸೇರಿದಂತೆ ಜಿಲ್ಲೆಯ ಒಟ್ಟು 1031 ಲಸಿಕಾ ಬೂತ್‍ಗಳಲ್ಲಿ ಲಸಿಕೆ ಹಾಕುವP Áರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೆಟರ್‍ಗಳಾಗಿ ಕಾರ್ಯನಿರ್ವಹಿಸುತ್ತಾರೆ. ಲಸಿಕೆಯನ್ನು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರು ಜನವರಿ 19 ಭಾನುವಾರದಂದು ಪುನಃ ಲಸಿಕೆ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೋರಿರುತ್ತಾರೆ.

error: Content is protected !!