ಶಿವಮೊಗ್ಗ, ಸೆಪ್ಟೆಂಬರ್ 30: 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ ಸಲಕರಣೆಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸು ಅಕ್ಟೋಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಪಡೆಯಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
