ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ವತಿಯಿಂದ ಇಂದು ಬಸವ ಜಯಂತಿಯನ್ನು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಉದ್ಘಾಟನೆಯನ್ನು ಮಾನ್ಯ ಸಂಸತ್ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರರವರು ನೆರವೇರಿಸಿದರು. ಬಸವ ಕೇಂದ್ರದ ಶ್ರೀ ಮರುಳ ಸಿದ್ಧ ಸ್ವಾಮೀಜಿರವರು ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ರುದ್ರೇಗೌಡ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾನ್ಯ ಶ್ರೀ ಡಿ.ಎಸ್. ಅರುಣ್, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಶ್ರೀ ಷಡಾಕ್ಷರಿ, ಪಾಲಿಕೆ ಮೇಯರ್ ರವರಾದ ಶ್ರೀಮತಿ ಸುವರ್ಣ ಶಂಕರ್, ಉಪಮೇಯರ್ ರವರಾದ ಶ್ರೀಮತಿ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯರಾದ ಶ್ರೀ ಯೋಗೀಶ್, ಶ್ರೀ ಚನ್ನಬಸಪ್ಪ, ಶ್ರೀ ವಿಶ್ವಾಸ್, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎನ್.ಜೆ.ರಾಜಶೇಖರ್ (ಸುಭಾಷ್), ಅಖಿಲ ಭಾರತ ವೀರಶೈವ ಮಹಾಸಭಾದ ಶಿವಮೊಗ್ಗ ಘಟಕದ ಅಧ್ಯಕ್ಷರಾದ ಶ್ರೀ ರುದ್ರಮುನಿ, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾಂತಾ ಆನಂದ್, ಮಾಜಿ ಶಾಸಕರಾದ ಶ್ರೀ ಹೆಚ್. ಎಂ. ಚಂದ್ರಶೇಖರಪ್ಪರವರು ಹಾಜರಾಗಿದ್ದರು. ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಶಾಂತರಾಜ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿ, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಅನುರಾಧ, ಪಾಲಿಕೆ ಆಯುಕ್ತರಾದ ಶ್ರೀ ಚಿದಾನಂದ ವಠಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್. ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.