ಮುಂಬಯಿಯಿಂದ ಹಿಂತಿರುಗಿದ್ದ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ ಕರೋನಾ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಸದರಿ ವ್ಯಕ್ತಿ ಈಗಾಗಲೇ ಕ್ವಾರೆಂಟೈನ್ನಲ್ಲಿದ್ದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಆ ವ್ಯಕ್ತಿಯೊಂದು ಪ್ರಾಥಮಿಕವಾಗಿ ಸಂಬಂಧ ಹೊಂದಿದ್ದ 12 ಮಂದಿಯನ್ನು ಗುರುತಿಸಲಾಗಿದ್ದು, ಎಲ್ಲರನ್ನು ಕ್ವಾರೆಂಟೈನ್ ಮಾಡಲಾಗಿದೆ. ಇನ್ನುಳಿದಂತೆ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ ಕ್ವಾರೆಂಟೈನ್ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.