ಕೇಂದ್ರ ಹಾಗು ರಾಜ್ಯ ಸರಕಾರಗಳ ಸಹಯೋಗದೊಂದಿಗೆ ನಡೆಯಲಿರುವ ಪಲ್ಸ್‌ ಪೋಲಿಯೋ ಕಾಯ೯ಕ್ರಮ ಪೋಲಿಯೋ ಮುಕ್ತ ಭಾರತಕ್ಕಾಗಿ ನಡೆಯುತ್ತದೆ. ಇದೇ ತಿಂಗಳ ೧೯ ರಂದು ಭಾನುವಾರ 5 ವಷ೯ ವಯೋಮಿತಿ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಪೋಷಕರು ತಮ್ಮ ಮಕ್ಕಳಿಗೆ ಹಾಕಿಸಬೇಕು.ಈ ಅಭಿಯಾನ ಯಶಸ್ವಿ ಅನುಷ್ಟಾನಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ,ಹಾಗು ಇತರೆ ಇಲಾಖೆ ಗಳ ಮತ್ತು ಸಂಘ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪೋಲಿಯೋ ಲಸಿಕಾ ಕಾಯ೯ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಾದ್ಯಂತ 0 ಯಿಂದ 5 ವಷ೯ದೊಳಗಿನ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆಯನ್ನು ಹಾಕುವ ಕಾಯ೯ಕ್ರಮವನ್ನು ಬೃಹತ್ ಕಾಯ೯ಕ್ರಮವನ್ನು ಆರೋಗ್ಯ ಇಲಾಖೆ ಹಮ್ಮಿಕೊಳ್ಳಲಾಗಿದೆ. ಮೊದಲನೇ ದಿವಸ ಬೂತ್ ನಲ್ಲಿ ಪೋಲಿಯೋ ಲಸಿಕೆಯನ್ನು ಹಾಕುವ ಕಾಯ೯ಕ್ರಮವನ್ನು ಹಮ್ಮಿಕೊಂಡಿದ್ದು 2 ಮತ್ತು 3ನೇ ದಿನ ಮನೆ ಮನೆ ಗಳಿಗೆ ಭೇಟಿ ನೀಡಿ ಬಿಟ್ಟು ಹೋಗಿರುವ ಮಕ್ಕಳಿಗೆ ಲಸಿಕೆಯನ್ನು ಹಾಕುವ ಕಾಯ೯ಕ್ರಮಕ್ಕೆ ಆರೋಗ್ಯ ಇಲಾಖೆ ಸಜ್ಜಾಗಿದೆ.
ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು . ಶಾಲೆಗಳಲ್ಲಿ ಅಂಗನವಾಡಿ ಕೆಂದ್ರಗಳಲ್ಲಿ ಬಸ್‌ ನಿಲ್ದಾಣ ಹಾಗು ರೈಲ್ವೇ ನಿಲ್ದಾಣ ಇತರೆಡೆಗಳಲ್ಲಿ ಲಸಿಕೆಯನ್ನು ಹಾಕುವ ವ್ಯವಸ್ಥೆಯನ್ನು ಮಾಡಲಾಗಿದೆ. ಲಸಿಕಾ ಕಾಯ೯ಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಜೊತೆಗೆ . ಶಿಕ್ಷಣ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಆಶಾ ಕಾಯ೯ಕತೆ೯ಯರು ಈ ಪಲ್ಸ್ ಪೋಲಿಯೋ ಕಾಯ೯ಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
News Next ನೊಂದಿಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ ಇದೇ ತಿಂಗಳ ೧೯ ರಂದು ನಡೆಯುವ ಪಲ್ಸ್ ಪೋಲಿಯೋ ಕಾಯ೯ಕ್ರಮದ ಬಗ್ಗೆ ಮಾಹಿತಿ ನೀಡಿ೨ ಹನಿಗಳಿಂದ ಭಾರತವನ್ನು ಪೋಲಿಯೋ ಮುಕ್ತ ಮಾಡಲು ಅವಕಾಶವಿದೆ. ಈಗಾಗಲೇ ಭಾರತ ಪೋಲಿಯೋ ಮುಕ್ತ ದೇಶವಾಗಿದೆ, ಆದರೂ ಗಡಿ ದೇಶಗಳಾದ ಪಾಕಿಸ್ಥಾನ, ಅಫ್ಘಾನಿಸ್ಥಾನಗಳಲ್ಲಿ ಪ್ರಕರಣಗಳು ಇರುವುದರಿಂದ ಮುಂಜಾಗ್ರತಾ ದೃಷ್ಟಿಯಿಂದ ನಮ್ಮಲ್ಲಿ ಇದೇ ತಿಂಗಳ ೧೯ರಂದು ಭಾನುವಾರ ಒಂದು ಸುತ್ತಿನ ಪೋಲಿಯೋ ಲಸಿಕೆಯನ್ನು ಹಾಕುವ ಕಾಯ೯ಕ್ರಮವನ್ನು ಹಮ್ಮಿಕೊಂಡಿದ್ದೇವೆ ದಯಮಾಡಿ ಸಾವ೯ಜನಿಕರು ಸಹಕಾರ ನೀಡಿ ಕಾಯ೯ಕ್ರಮವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

error: Content is protected !!