ಹಾಸನದ ಬಿಜೆಪಿ ಶಾಸಕರಾದ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯವನ್ನು ಖಂಡಿಸಿ ಇಂದು ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಸಂಸದ ಶ್ರೀ ಬಿವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಘಟಕ ವತಿಯಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿವೈ ರಾಘವೇಂದ್ರ ಅವರು ನಮ್ಮ ಶಾಸಕರಾದ ಪ್ರೀತಂ ಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಖಂಡನೀಯವಾಗಿದ್ದು ಇದನ್ನು ನಾವು ಖಂಡಿಸುತ್ತೇವೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದಾಗಿನಿಂದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ವಿನಾಕಾರಣ ವಿರೋಧ ಪಕ್ಷದ ಮೇಲೆ ಗೂಂಡಾ ವರ್ತನೆ ಪ್ರವೃತ್ತಿಯನ್ನು ನಡೆಸುತ್ತಾ ಬಂದಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ .ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್ ದತ್ತಾತ್ರಿ ಅವರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಡಿಎಸ್ ಅರುಣ್ ಅವರು .ಕಾರ್ಯದರ್ಶಿ ಬಿಆರ್ ಮಧುಸೂದನ್ ರವರು ನಗರ ಬಿಜೆಪಿ ಅಧ್ಯಕ್ಷರಾದ ನಾಗರಾಜ್ ಮನರ ಪಾಲಿಕೆ ಸದಸ್ಯರಾದ ಸುರೇಖಾ ಮುರುಳಿಧರ್.ಹಿರಣ್ಣಯ್ಯ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು

error: Content is protected !!