ಶಿವಮೊಗ್ಗ,ಫೆ.೧೦: ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಆಯನೂರು ಶಿವಾನಾಯ್ಕ್ ನೇಮಕವಾಗಿದ್ದಾರೆ. ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಈ ನೇಮಕ ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಿದ್ದಾರೆ.
ಆಯನೂರು ಶಿವಾನಾಯ್ಕ ಅವರು, ಯುವ ಜನತಾದಳ ಜಿಲ್ಲಾಧ್ಯಕ್ಷ, ರಾಜ್ಯಪ್ರಧಾನ ಕಾರ್ಯದರ್ಶಿ, ಪರಿಶಿಷ್ಟ ವರ್ಗಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೂರು ದಶಕಗಳ ಕಾಲ ಪಕ್ಷದಲ್ಲಿ ನಿಷ್ಠೆ ಮತ್ತು ಸೇವೆಯನ್ನು ಗುರುತಿಸಿ ಪ್ರಸ್ತುತ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.