ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಶಿವಮೊಗ್ಗ ಸಿಟಿಜನ್ ಫೋರಂ ವತಿಯಿಂದ ನಾಗರೀಕ ಅಭಿನಂದನಾ ಸಮಾರಂಭದ ಪ್ರಯುಕ್ತದ ವೇಳೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ, ಮರಿಸ್ವಾಮಿ, ಗಣೇಶ್ ಎಂ.ಅಂಗಡಿ, ಯು.ಮಧುಸೂದನ್ ಐತಾಳ್, ಸುಕುಮಾರ್, ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಉಪಸ್ಥಿತರಿದ್ದರು.