ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ದಿನಾಂಕ.13-12-2022 ರಂದು ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಛೇರಿ, ಬೆಂಗಳೂರು ಇದರ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಟಿ. ರಮೇಶ್ ರವರು ಭೇಟಿ ನೀಡಿದ್ದು, ಬ್ಯಾಂಕಿನ ವ್ಯವಹಾರಗಳು, ಲಾಭಗಳಿಕೆ, ಕೃಷಿ ಸಾಲ ಹಂಚಿಕೆ, ಆರ್ಥಿಕ ಸ್ಥಿತಿಗತಿಗಳ ಅವಲೋಕನ ನಡೆಸಿ, ಬ್ಯಾಂಕು ಆರ್ಥಿಕ ಸದೃಡತೆಯನ್ನು ಹೊಂದಿದ್ದು, ಪ್ರಗತಿಯತ್ತ ಸಾಗುತ್ತಿರುವ ಬಗ್ಗೆ ಪ್ರಶಂಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕು ಗ್ರಾಹಕರಿಗೆ ಒದಗಿಸುತ್ತಿರುವ ‘ಮೊಬೈಲ್ ಆ್ಯಪ್’ ಸೇವೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಬಿ. ಚನ್ನವೀರಪ್ಪನವರು ಮಾತನಾಡಿ ಬ್ಯಾಂಕಿನ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮೂಲಕ ಮೊಬೈಲ್ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು, ಬ್ಯಾಂಕು ಮೊದಲ ಹಂತದಲ್ಲಿ ನಾನ್ ಫಂಡ್ ಸೇವೆಗಳನ್ನು ಮಾತ್ರ ಒದಗಿಸುತ್ತಿದ್ದು, ಗ್ರಾಹಕರ ಖಾತೆಗಳ ಬ್ಯಾಲೆನ್ಸ್, ಮಿನಿ ಪಾಸ್ ಬುಕ್, ಬ್ಯಾಂಕಿನ ಸಾಮಾನ್ಯ ಮಾಹಿತಿಗಳು, ಪಾಸಿಟೀವ್ ಪೇ ಸಿಸ್ಟ್ಂ ನಡಿಯಲ್ಲಿ ಗ್ರಾಹಕರು ನೀಡಿದ ಚೆಕ್ ವಿವರಗಳನ್ನು ಬ್ಯಾಂಕಿಗೆ ಒದಗಿಸಬಹುದಾಗಿದೆ ಎಂದು ಮುಂದಿನ ದಿನಗಳಲ್ಲಿ ಫಂಡ್ ಆಧಾರಿತ ಸೌಲಭ್ಯಗಳನ್ನು ಕಲ್ಪಿಸಲಾಗುವುದೆಂದು ತಿಳಿಸಿದರು
ಹಾಗೂ ಗ್ರಾಹಕರು ತಮ್ಮ ಓಟಿಪಿ, ಪಾಸ್ ವರ್ಡ್, ಎಂಪಿನ್ ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದೆಂದು, ಗೌಪ್ಯತೆ ಕಾಪಾಡಿಕೊಳ್ಳಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಹೆಚ್.ಎಲ್.ಷಡಾಕ್ಷರಿಯವರು, ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ನಾಗೇಶ್. ಎಸ್.ಡೋಂಗರೆಯವರು, ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀ ಜಿ.ವಾಸುದೇವರವರು, ನಬಾರ್ಡ್ ಜಿಲ್ಲಾ ಅಧಿಕಾರಿಗಳಾದ ಶ್ರೀ ರವಿಯವರು ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಶಾಖೆಗಳಿಂದ ಹೆಚ್ಚಿನ ಮಾಹಿತಿ ಪಡೆದು ಬ್ಯಾಂಕಿನ ಮೊಬೈಲ್ ಅ್ಯಪ್ ಮತ್ತು ಎಲ್ಲಾ ಸೇವಾ ಸೌಲಭ್ಯಗಳ ಪ್ರಯೋಜನವನ್ನು ಪಡೆಯಬೇಕೆಂದು ಮಾನ್ಯ ಅಧ್ಯಕ್ಷರು ತಿಳಿಸಿದರು