ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಹಲವರಲ್ಲಿ ಡೆಂಗ್ಯೂ ಕೂಡ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದಕ್ಕಾಗಿ ವಿಶೇಷ ತಂಡವನ್ನು ರಚಿಸಿ ಸರ್ವೆ ಕಾರ್ಯ ನಡೆಯುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದ್ದು ಆಸ್ಪತ್ರೆಯಲ್ಲಿ ಇದಕ್ಕೆ ವಿಶೇಷ ಕೊಠಡಿಗಳನ್ನು ತೆರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಹಿರಿಯ ಆರೋಗ್ಯ ಸಹಾಯಕರು, ವೈದ್ಯರನ್ನೊಳಗೊಂಡ ತಂಡ ರಚಿಸಿ ಜನರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಮಳೆ-ಬಿಸಿಲಿನ ವಾತಾವರಣದಿಂದ ಮಳೆನೀರು ಸಂಗ್ರಹವಾದ ಕಡೆಯಲ್ಲಿ ಡೆಂಗ್ಯೂ ಹರಡುವ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಹೆಚ್ಚು ಸೊಳ್ಳೆಗಳನ್ನು ಉತ್ಪತ್ತಿ ಮಾಡುತ್ತದೆ. ಜನರು ಶೀತಸಂಬಂಧೀ ಜ್ವರ ಬಂದಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಾತಾವರಣವನ್ನು ಸ್ಚಚ್ಛವಾಗಿಟ್ಟುಕೊಳ್ಳಬೇಕು ಮತ್ತು ಬಿಸಿಯಾದ ಆಹಾರಪದಾರ್ಥ ಹಾಗೂ ಕುದಿಸಿದ ನೀರು ಉಪಯೋಗಿಸುವಂತೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆಗಳನ್ನು ಸಹ ನಡೆಸಲಾಗುತ್ತಿದೆ. ಸುರಿಯುವ ಮಳೆಯನ್ನೂ ಲೆಕ್ಕಿಸದೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಶಿವಮೊಗ್ಗದ ಇಲಾಖಾ ಕಾರ್ಯಕ್ರಮಗಳ ನೋಡಲ್ ಅದೀಕಾರಿ,ಶಂಕರಪ್ಪ, ಮಾತನಾಡಿ ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ 150ಕ್ಕೂ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು ಇದಕ್ಕೆ ಬೇಕಾದ ಎಲ್ಲಾ ಅಗತ್ಯಕ್ರಮ ಕೈಗೊಳ್ಳಲಾಗಿದ್ದು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಆರೋಗ್ಯ ಸಹಾಯಕಿ ಶಾಲಿನಿ ಮಾತನಾಡಿ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ತಂಡವನ್ನು ರಚಿಸಿ ಮನೆ ಮನೆ ಸರ್ವೆ ಕಾರ್ಯ ನಡೆಯುತ್ತಿದೆ. ಆರೋಗ್ಯ ಸುರಕ್ಷತೆಯ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ರೇಷ್ಮಾ, ಆರೋಗ್ಯ ಕಾರ್ಯಕರ್ತೆ ಮಾತನಾಡಿ ಮಲೆನಾಡಿನಲ್ಲಿ ಮಳೆ-ಬಿಸಿಲಿನ ಈ ಸಂದರ್ಭದಲ್ಲಿ ಚರಂಡಿ, ಗೆರಟೆಚಿಪ್ಪು, ಟೈರ್‍ಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ನೀರು ಸಂಗ್ರಹಿಸುತ್ತಿರುವುದು ಮತ್ತು ಬಹಳ ದಿನ ಅದನ್ನೇ ಉಪಯೋಗಿಸದಿರುವಂತೆ ಜನರಿಗೆ ತಿಳುವಳಿಕೆ ನೀಡುತ್ತಿದ್ದೇವೆ ಎಂದು ಹೇಳಿದರು.

ಸಾಗರದ ಡಾ|| ಕೆ.ಎಸ್. ಮೋಹನ್, ತಾಲ್ಲೂಕು ವೈದ್ಯಾಧಿಕಾರಿ, ಮಾತನಾಡಿ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ 52 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿವೆ. ಎಲ್ಲಾ ಅಗತ್ಯಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದ್ದು ಡೆಂಗ್ಯೂ ಸೋಂಕಿತರ ಮನೆಗಳಿಗೆ ತೆರಳಿ ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಪರಿಶೀಲಿಸಿ ಸ್ವಚ್ಛವಾಗಿಡುವಂತೆ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

error: Content is protected !!