ಶಿವಮೊಗ್ಗ, ಸೆಪ್ಟೆಂಬರ್ ೦೧:ಜಿಲ್ಲಾಡಳಿತ, ಜಿಲ್ಲಾ ನ್ಯಾಯಾಲಯ, ಸರ್ಜಿ ಫೌಂಡೇಷನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಂದು ಡಿವಿಎಸ್ ಕಾಲೇಜ್ ವೃತ್ತದ ಬಳಿ ಇರುವ ಬಸವೇಶ್ವರ ಪುತ್ಥಳಿಗೆ ಹೂಮಾಲೆ ಹಾಕುವ ಮೂಲಕ ‘ಸೆ.೩ ರಂದು ಕೈಗೊಳ್ಳಲಿರುವ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ ಕಾಲ್ನಡಿಗೆ ಜಾಥಾ ಹಾಗೂ ಸೌಹಾರ್ಧ ಸಂದೇಶ ಸಾರುವ ವಾಹನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲೆಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಸೆ.೩ ರಂದು ಏರ್ಪಡಿಸಲಾಗಿರುವ ನಮ್ಮ ನಡಿಗೆ ಶಾಂತಿಯ ಕಡೆಗೆ ಕಾಲ್ನಡಿಗೆ ಜಾಥಾ ಮತ್ತು ಸೌಹಾರ್ಧ ಸಂದೇಶ ಸಾರುವ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ಎ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸರ್ಜಿ ಫೌಂಡೇಷನ್‌ನ ಡಾ.ಧನಂಜಯ ಸರ್ಜಿ, ವಕೀಲರಾದ ಕೆ.ಪಿ.ಶ್ರೀಪಾಲ್ ಇತರರು ಹಾಜರಿದ್ದರು.
