ಶಿವಮೊಗ್ಗ, ಮಾರ್ಚ್ 16 : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 19/03/2023 ರ ಭಾನುವಾರದಂದು 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ “ಕಾಶೀಪುರ ಕೆನರಾ ಬ್ಯಾಂಕ್ ಎದುರು, ನೇತಾಜಿ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ, ಓ.ಟಿ.ರಸ್ತೆಯ ಪರಿಚಯ ಸ್ಟೋರ್ಸ್ ಹತ್ತಿರ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಪೊಲೀಸ್ ಚೌಕಿ ಹತ್ತಿರ ವಿನೋಬನಗರ, ಶಿವಮೊಗ್ಗ”ಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.