ಶಿವಮೊಗ್ಗ. ಮೇ 24 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 25ರಂದು ಸಂಜೆ 5.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನೂತನ ಸಾಂಸದರಿಗೆ ಅಭಿನಂದನೆ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಭದ್ರಾವತಿ ಪೂರ್ಣಪ್ರಜ್ಞ ಶಾಲೆಯ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿನಿ ಕು.ನಂದಿನಿ ಅವರು ಉದ್ಘಾಟಿಸುವರು. ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ ಅವರು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸುವರು. ನೂತನವಾಗಿ ಆಯ್ಕೆಯಾದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು. ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಗೂ ನೌಕರರ ಸಂಘದ ಕೋಶಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿಧಾನ ಪರಿಷತ್ ಮತ್ತು ವಿಧಾನ ಸಭೆಗಳ ಶಾಸಕರು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ಎಂ.ಅಶ್ವಿನಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜನಾಯ್ಕ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಇದೇ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು, ಕೋಶಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಲ್ಲಾ ತಾಲೂಕುಗಳ ನೌಕರರ ಸಂಘದ ಅಧ್ಯಕ್ಷರುಗಳು ಉಪಸ್ಥಿತರಿರುವರು.

error: Content is protected !!