
ಜಿಲ್ಲೆಯ ಹಲವು ಪ್ರವಾಸಿ ತಾಣಗಳು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ ಆದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಡುವುದಂತೆ ಜಾಗೃತಿರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಭದ್ರಾವತಿ ತಾಲ್ಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಸ್ವಚ್ಛತಾ ಹಿ ಸೇವಾ ಆಂದೋಲನದ ಅಂಗವಾಗಿ ಭದ್ರಾ ಅಣೆಕಟ್ಟಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಕಾರ್ಯಕ್ರದಲ್ಲಿ 150ಕ್ಕೂ ಹೆಚ್ಚಿನ ಜನರು ಭಾಗವಹಿಸಿ ಎಲ್ಲೆಂದರಲ್ಲಿ ಬಿಸಾಡಿದ ಕಸಗಳನ್ನು ವಿಲೇವಾರಿ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು.
ಗ್ರಾಮ ಪಂಚಾಯಿತಿ ಸಿಂಗನಮನೆ, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜಿಲ್ಲಾ ಸಮಾಲೋಚಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
