
ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಪ್ಲಾಸ್ಟಿಕ್ ನಿಷೇಧ ಜನಾಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಕುವೆಂಪು ರಂಗಮಂದಿರದ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಉಪಮೇಯರ್ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಅನುರಾಧ ಮತ್ತಿತರರು ಉಪಸ್ಥಿತರಿದ್ದರು.