ಶಿವಮೊಗ್ಗ, ಜನವರಿ 04 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ 2020ನೇ ಜನವರಿ 6 ರಿಂದ 8ರ ವರೆಗೆ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ದಿನಗಳಂದು ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾಗುವ ಎಲ್ಲಾ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುತ್ತಾರೆ. ಸಾರ್ವಜನಿಕರು ಮಿಂಚಿನ ನೋಂದಣಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.