ಶಿವಮೊಗ್ಗ :- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಸೆ.14ರ ನಾಳೆ ಬೆಳಿಗ್ಗೆ 10.30ಕ್ಕೆ ಸಿಟಿಕ್ಲಬ್ ಪಕ್ಕದ ಮೀಡಿಯಾ ಹೌಸ್ನಲ್ಲಿ ಕರೋನಾ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಮೇಯರ್ ಸುನೀತಾ ಅಣ್ಣಪ್ಪ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು, ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಉಪಸ್ಥಿತರಿರುವರು.
ಅಂದು ಮಧ್ಯಾಹ್ನ 12.30ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಕೋವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಎರಡೂ ಲಸಿಕೆ ಲಭ್ಯವಿರುವುದು. ಬೂಸ್ಟರ್ ಡೋಸ್ ನೀಡಲು ಮೊದಲ 2 ಕರೋನ ಲಸಿಕೆ ಹಾಕಿಸಿರಬೇಕು ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು.
ನಗರದ ಪತ್ರಕರ್ತರು, ಪತ್ರಿಕಾ ಕಚೇರಿ ಸಿಬ್ಬಂದಿಗಳು ಈ ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಕೋರಿದ್ದಾರೆ.