ಶಿವಮೊಗ್ಗ, ಅಕ್ಟೋಬರ್-15 : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಕ್ಟೋಬರ್-17 ರಂದು ಮಧ್ಯಾಹ್ನ 2.00ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರವರ ಸಮ್ಮುಖದಲ್ಲಿ ಜಿಲ್ಲೆಯ ಅರ್ಹ 25 ಜನ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪ ಎಂ ದೊಡ್ಮನಿ ತಿಳಿಸಿದ್ದಾರೆ.