ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗವಾದ MRS ವೃತ್ತಕ್ಕೆ ನಾಮಕರಣ ಮಾಡಬೇಕೆಂದು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ ವತಿಯಿಂದ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್. ರುದ್ರೇಗೌಡ ಅವರೊಂದಿಗೆ ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಸಮ್ಮುಖದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದರು.

ಶಿಕಾರಿಪುರ ತಾಲ್ಲೂಕಿನ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳವಾದ ಉಡುತಡಿ ಗ್ರಾಮದಲ್ಲಿ ಅಕ್ಕಮಹಾದೇವಿಯ 65 ಅಡಿ ಎತ್ತರದ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾತನಾಡಿದ ಅವರು, ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೊಟ್ಟ ಮೊದಲ ಬಾರಿಗೆ ಈ ರಾಜ್ಯದ ಉಪಮುಖ್ಯಮಂತ್ರಿಯಾಗಿ
ಅಧಿಕಾರದ ಗದ್ದುಗೆ ಏರಿದ ತರುವಾಯ ಸಿಕ್ಕ ಸ್ವಲ್ಪ ಅವಧಿಯಲ್ಲಿಯೇ ಮಲೆನಾಡಿನ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆದಿದ್ದರು.

ಅದರಲ್ಲೂ ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತಂದು ಈ ನಾಡಿನ ಮುಖ್ಯಮಂತ್ರಿಗಳಾದ ನಂತರ ಊಹಿಸಲು ಅಸಾದ್ಯವಾದ ರೀತಿಯಲ್ಲಿ ಸಾವಿರಾರು ಕೋಟಿ ಅನುದಾನ ಒದಗಿಸಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿ ರಾಜ್ಯದ ಭೂಪಟದಲ್ಲಿ ಜಿಲ್ಲೆಯ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದ್ದಾರೆ.

ಇಷ್ಟೇ ಅಲ್ಲದೆ ಜಿಲ್ಲೆಯ ಮುಂದಿನ ಪೀಳಿಗೆಯು ಸ್ಥಳೀಯವಾಗಿ ತಮ್ಮ ಭವಿಷ್ಯ ಕಟ್ಟಿಕೊಳ್ಳುವ ಆಲೋಚನೆಯಿಂದ ಜೊತೆಗೆ ಅನೇಕ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಹತ್ತಾರು ಉತ್ಪಾದನಾ ಕಾರ್ಖಾನೆಗಳು, ಐ.ಟಿ- ಬಿ.ಟಿ ಇನ್ನಿತರ ಕಂಪೆನಿಗಳು ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಆಕರ್ಷಿಸಲು ತಮ್ಮ ಬಹು ವರ್ಷಗಳ ಕನಸಿನ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿ ಅನುಕೂಲ ಮಾಡಿಕಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಜಿಲ್ಲೆಯ ಜನರ ಆಶಯದಂತೆ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಒತ್ತಾಸೆ ವ್ಯಕ್ತಪಡಿಸಿದರು. ಅದರಂತೆ ಮಾನ್ಯ ಮುಖ್ಯಮಂತ್ರಿಗಳು ಖುದ್ದು ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದರು ಕೂಡ ಅದನ್ನು ಒಪ್ಪದೇ, ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಹೃದಯ ವೈಶಾಲತೆ ತೋರಿದ್ದಾರೆ.

ಹಾಗಾಗಿ ಅದೇ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಬರುವ MRS ವೃತ್ತಕ್ಕೆ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಸಮುದಾಯದ ಒತ್ತಾಸೆಯಂತೆ ಹಾಗೂ ಎಲ್ಲ ವರ್ಗದ ಜನತೆಯ ಪರವಾಗಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಸವೇಶ್ವರ ವೀರಶೈವ ಸಂಘದ ನಿರ್ದೇಶಕರಾದ ಶ್ರೀ ಮೋಹನ್ ಬಾಳೆಕಾಯಿ ಅವರು, ಶ್ರೀಮತಿ ಅನಿತಾ ರವಿಶಂಕರ್ ಅವರು, ಶ್ರೀ ಮಹೇಶ್ ಮೂರ್ತಿ ಅವರು, ಪ್ರಮುಖರಾದ ಶ್ರೀ ಉಮೇಶ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!