ಶಿವಮೊಗ್ಗ, ನವೆಂಬರ್ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆ, ಎನ್.ಟಿ.ರಸ್ತೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 23 ರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಉರ್ದು ಪ್ರೌಢಶಾಲೆ, ಎನ್.ಟಿ.ರಸ್ತೆ ಶಿವಮೊಗ್ಗ ಇಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನವೆಂಬರ್ 23 ರಿಂದ 27 ರವರೆಗೆ 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.