ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ ಹೊಸದಾಗಿ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ಕೇಂದ್ರ ವಲಯ), ಶಿವಮೊಗ್ಗ ಕಚೇರಿಯನ್ನು ನೂತನವಾಗಿ ಮೇ 14ರಂದು ಆರಂಭಿಸಲಾಗಿದೆ.
ಮುಖ್ಯ ಇಂಜಿನಿಯರ್ ಬಿ.ಟಿ.ಕಾಂತರಾಜ್ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಕಚೇರಿ ವ್ಯಾಪ್ತಿಯಲ್ಲಿ ಶಿವಮೊಗ್ಗ ವಿಭಾಗ, ಶಿವಮೊಗ್ಗ ವಿಶೇಷ ವಿಭಾಗ, ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ವಿಭಾಗಗಳು ಸೇರಿವೆ.
ಈ ಕಚೇರಿಯು ಶಿವಮೊಗ್ಗ ವೃತ್ತ ಕಚೇರಿ ಆವರಣ, ದುರ್ಗಿಗುಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದ್ದು, ದೂ.ಸಂ. 08182-270926. ಇದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರು ಈ ವಿಳಾಸದಲ್ಲಿ ವ್ಯವಹರಿಸಬಹುದಾಗಿದೆ ಎಂದು ಮುಖ್ಯ ಇಂಜಿನಿಯರ್ ಬಿ.ಟಿ.ಕಾಂತರಾಜ್ ತಿಳಿಸಿದ್ದಾರೆ.