ಶಿವಮೊಗ್ಗ, ಮಾರ್ಚ್ 18,: ಲೋಕೋಪಯೋಗಿ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ದ ಉದ್ಘಾಟನೆಯನ್ನು ಇಂದು ಶಾಸಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ನೆರವೇರಿಸಿ, ಶುಭ ಕೋರಿದರು.
ಲೋಕೋಪಯೋಗಿ ಕಚೇರಿಗಳು ಒಂದೇ ಸೂರಿನಡಿ ಬರುವಂತೆ ಸಂಕೀರ್ಣ ಕಟ್ಟಡವನ್ನು ಒಟ್ಟು
ರೂ. 23.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಚೇರಿಗಳು ಬೇರೆ ಬೇರೆ ಸ್ಥಳಗಳಲ್ಲಿ ಮತ್ತು ಬಾಡಿಗೆ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಒಂದೇ ಕಟ್ಟಡದ ಅಡಿಯಲ್ಲಿ ಬರುವಂತೆ ಈ ಕಟ್ಟಡ ಸಂಕೀರ್ಣ ನಿರ್ಮಾಣಗೊಂಡಿರುತ್ತದೆ.
ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಬಿ.ಟಿ.ಕಾಂತರಾಜು, ಅಧೀಕ್ಷಕ ಇಂಜಿನಿಯರ್ ಕೆ.ಜಿ.ಜಗದೀಶ್, ಕಾರ್ಯಪಾಲಕ ಇಂಜಿನಿಯರ್ಗಳಾದ ಸಂಪತ್ ಕುಮಾರ್ ಪಿಂಗ್ಳೆ, ಕಿರಣ್ ಎಸ್ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.