ಶಿವಮೊಗ್ಗ,ಆ:೫: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಭಕ್ತರ ಸುರಕ್ಷತೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಭಕ್ತಜನರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಅದೇ ರೀತಿ ಆಗಸ್ಟ್ ೬ ರಿಂದ ೧೩ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
