ಶಿವಮೊಗ್ಗ. ಮೇ 16 :: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮೇ 18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ತ್ಯಾವರೆಚಟ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುವುದರಿಂದ ಈ ಫೀಡರ್‍ನ ವ್ಯಾಪ್ತಿಗೊಳಪಡುವ ಅಶ್ವಥ್‍ನಗರ ಹಾಗೂ ಎಲ್.ಬಿ.ಎಸ್.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!