News Next

ಶಿವಮೊಗ್ಗ, ನವೆಂಬರ್ 29 ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೆÇೀಲಿಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ ಶಿವಮೊಗ್ಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ, ಎನ್.ಎಸ್.ಎಸ್ ಘಟಕ-1,2,3, ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 1 ರಂದು ವಿಶ್ವ ಏಡ್ಸ್‍ದಿನ-2021 ಪ್ರಯುಕ್ತ ಜಾಗೃತಿ ಜಾಥಾ ಮತ್ತು ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ.


    ಡಿ.1 ರ ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈಕಲ್ ಜಾಥಾ ಏರ್ಪಡಿಸಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆವರಣದಿಂದ ಐಎಂಎ ಹಾಲ್‍ವರೆಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿದ್ದು, ನಂತರ ಐಎಂಎ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
    ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್ ಎಸ್.ಎ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಪ್ರಸಾದ್ ಬಿ.ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ.ಶಿವಯೋಗಿ, ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್, ಕುವೆಂಪು ವಿವಿ ಎನ್‍ಎಸ್‍ಎಸ್ ಜಿಲ್ಲಾ ಕಾರ್ಯಕ್ರಮಾಧಿಕಾರಿ ಪರಿಸರ ನಾಗರಾಜ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ದಿನೇಶ್.ಜಿ.ಸಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

error: Content is protected !!