ಶಿವಮೊಗ್ಗ, ಜೂನ್ 12 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಶಿವಮೊಗ್ಗ ಇವರ ವತಿಯಿಂದ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಬೆಳಿಗ್ಗೆ 10 ಗಂಟೆಗೆ ಐಎಂಎ ಹಾಲ್ ಇಲ್ಲಿ ಏರ್ಪಡಿಸಲಾಗಿದೆ.

Follow this link to join my WhatsApp group: https://chat.whatsapp.com/HEacYI7Sk4lEDMDf26c5pa
ಜೂನ್ 14 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ವಿಶ್ವ ರಕ್ತದಾನಿಗಳ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಕೋರ್ಟ್ ವೃತ್ತ, ಗೋಪಿ ವೃತ್ತದ ಮೂಲಕ ಮುಂದುವರೆದು ಐಎಂಎ ಹಾಲ್ ತಲುಪಲಿದೆ.

‘ರಕ್ತ ನೀಡಿ, ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ನಿರಂತರವಾಗಿ ಹಂಚಿಕೊಳ್ಳಿ’ ಎಂಬ ಘೋಷವಾಕ್ಯದಡಿ ಈ ಸಾಲಿನ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ರಕ್ತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ/ಸಾರ್ವಜನಿಕರಿಗೆ ಜಾಗೃತಿ/ಮಾಹಿತಿ ನೀಡಲಾಗುವುದು ಮತ್ತು ರಕ್ತದಾನಿಗಳಿಗೆ ಪ್ರೋತ್ಸಾಹ ನೀಡಿ ಅವರನ್ನು ಅಭಿನಂದಿಸಲಾಗುವುದು.

error: Content is protected !!