ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನ: ಜಾಥಾ
ಶಿವಮೊಗ್ಗ, ಜೂನ್ 13, (ಕರ್ನಾಟಕ ವಾರ್ತೆ) : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್- ಬೆಂಗಳೂರು, ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ-14567 ಹಾಗೂ ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್-15ರಂದು ಬೆಳಗ್ಗೆ ಪತ್ರಿಕಾ ಭವನ, ಆರ್.ಟಿ.ಓ.ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನ-2023 ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕದೊಂದಿಗೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಾಥಾದಲ್ಲಿ ಹಿರಿಯ ನಾಗರಿಕರ ಸಂಘಗಳು, ಅನುದಾನಿತ ಮತ್ತು ಅನುದಾನರಹಿತ ವೃದ್ಧಾಶ್ರಮಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು/ ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸುತ್ತಾರೆ.
ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ|| ಸೆಲ್ವಮಣಿ ಆರ್. ಉದ್ಘಾಟಿಸಲಿದ್ದಾರೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ ಶಿಲ್ಪಾ ಎಂ ದೊಡ್ಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಂತೋಷ್ ಕುಮಾರ್ ಹೆಚ್. ಪಾಲ್ಗೊಳ್ಳಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ.ಪ್ರಾ. ದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎನ್.ಚಂದನ್ ಭಾಗವಹಿಸಲಿದ್ದಾರೆ