ಶಿವಮೊಗ್ಗ, ಮಾರ್ಚ್- 06 : ಶಿವಮೊಗ್ಗ ಕನ್ನಡ ಸಂಸ್ಕøತಿ ಇಲಾಖೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 08 ರಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಮಹಿಳಾ ಸಾಂಸ್ಕøತಿಕ ಉತ್ಸವವನ್ನು ಆಯೋಜಿಸಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಗೌರವ ಉಪಸ್ಥಿತಿಯಲ್ಲಿ ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಎಸ್. ಕುಮಾರ್, ಸಂಸದ ಬಿ. ವೈ. ರಾಘವೇಂದ್ರ, ಶಾಸಕರುಗಳಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಬಿ. ಕೆ. ಸಂಗಮೇಶ್ವರ್, ಕೆ. ಬಿ. ಅಶೋಕ್ ನಾಯ್ಕ್, ಹಾಗೂ ವಿಧಾನ್ ಪರಿಷತ್ ಶಾಸಕರುಗಳು ಹಾಗೂ ನಗರದ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್. ವಠಾರೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು ಇವರುಗಳು ಉಪಸ್ಥಿತರಿರುತ್ತಾರೆ.
ಅಂದು ಬೆಳಿಗ್ಗೆ 08:30ರಿಂದ ರಂಗೋಲಿ, ರಸಪ್ರಶ್ನೆ, ಆಶು ಅಭಿನಯ, ಚಿತ್ರಕಲೆ, ಅನಿಲ ರಹಿತ ಅಡುಗೆ, ಸಾಂಪ್ರದಾಯಿಕ ಉಡುಗೆ-ತೊಡುಗೆಗಳ ಸ್ಫರ್ಧೆ ನಡೆಯಲಿದೆ ಹಾಗೂ ಸುಗಮ ಸಂಗೀತ, ಗುಮಟೆ ವಾದನ, ಜಾನಪದ ನೃತ್ಯ, ಉಪನ್ಯಾಸ ಕಾರ್ಯಾಕ್ರಮ, ಡೊಳ್ಳುಕುಣಿತ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಂದು ಸಂಜೆ 05:30ಕ್ಕೆ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಸಂಜೆ ಸಂಗೀತ ಸಂಜೆ ಮತ್ತು ನೃತ್ಯ ವೈವಿಧ್ಯ ಕಾರ್ಯಕ್ರಮವಿರಲಿದೆ. ಉತ್ಸವದಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಹಾಗೂ ಆಹಾರ ಮಳಿಗೆಗಳನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.
