ಸಾಗರ: ಸಾಗರ ತಾಲೂಕಿನ ಎಲ್ಲ ಶಿವ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ನಡೆಯಿತು.
ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಾಲ್ಕು ಯಾಮಗಳಲ್ಲಿ ಗಣಾಧೀಶ್ವರನಿಗೆ ಪೂಜೆ ಸಲ್ಲಿಸಲಾಯಿತು. ನಾರಿಕೇಳ ಅಭಿಷೇಕ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್, ಹರ್ಷವರ್ಧನ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ವಿವಿಧ ದೇವಾಲಯಗಳಲ್ಲಿ ಭಕ್ತರು ದೇವರ ಕೀರ್ತನೆಗಳನ್ನು ಹಾಡಿ ಪೂಜೆ ಸಲ್ಲಿಸಿದರು. ಬಹುತೇಕ ದೇವಸ್ಥಾನಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಮಾರಿಕಾಂಬ ಜಾತ್ರೆ ಹಾಗೂ ಶಿವರಾತ್ರಿ ಒಟ್ಟಿಗೆ ಮೇಳೈಸಿದ್ದರಿಂದ ಭಾರಿ ಸಂಖ್ಯೆಯಲ್ಲಿ ಜನಜಂಗುಳಿ ಉಂಟಾಗುತ್ತಿತ್ತು. ಸಾಗರದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡಬೇಕಾಯಿತು.

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.

ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ಗಣಪತಿಕೆರೆಯಲ್ಲಿ ಆಯೋಜಿಸಿರುವ ಬೋಟಿಂಗ್‍ನಲ್ಲಿ ಶುಕ್ರವಾರ ರಾತ್ರಿ ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಎಂಎಲ್‍ಸಿ ಪ್ರಫುಲ್ಲಾ ಮಧುಕರ್, ಉಪವಿಭಾಗಾಧಿಕಾರಿ ಡಾ. ಎಲ್.ನಾಗರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಜಾಲಿರೈಡ್ ನಡೆಸಿದರು.

error: Content is protected !!