ಶಿವಮೊಗ್ಗ ಜೂನ್ 17 : 2022-23 ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಂಚಾಯಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯಗಳು ದೊರಯಲಿವೆ.
ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಾಮಾನ್ಯ ರೈತರಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ಸಹಾಯಧನ ಸೌಲಭ್ಯ ಇರುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ, ಗೇರು ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಮಿನಿ ಟ್ರ್ಯಾಕ್ಟರ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಸಹಾಯಧನ ಸೌಲಭ್ಯವಿರುತ್ತದೆ.