ಶಿವಮೊಗ್ಗ, ಏಪ್ರಿಲ್ 26, :18 ವರ್ಷ ತುಂಬಿದ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬೆಂಬಲಿಸಬೇಕು ಹಾಗೂ ಸಂವಿಧಾನ ಕಲ್ಪಿಸಿಕೊಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾಗರ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ನಾಗೇಶ್ ಎನ್ ಬ್ಯಾಲಾಳ್ ತಿಳಿಸಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಸಾಗರ ವತಿಯಿಂದ ದಿ: 25-04-2023 ರಂದು ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಡ್ಡಾಯವಾಗಿ ಎಲ್ಲ ಅರ್ಹರು ಮತದಾನ ಮಾಡುವಂತೆ ಕೋರಿದ ಅವರು ನೆರಿದ್ದ ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಉಪ ನೋಡಲ್ ಅಧಿಕಾರಿ ನವೀದ್ ಅಹ್ಮದ್ ಪರ್ವೀಜ್ ಮಾತನಾಡಿ, ಸಾರ್ವಜನಿಕರು ಸಿ-ವಿಜಿಲ್ ಆ್ಯಪ್ ಬಳಸುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಕೈಜೋಡಿಸಬಹುದು. ಏಪ್ರಿಲ್ 11 ರವರೆಗೆ ಪರಿಷ್ಕರಣೆ ಆಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಲು ವಿಹೆಚ್ಎ ಆ್ಯಪ್ ಬಳಸಬಹುದು. ಈ ಬಾರಿ ಆಯೋಗವು ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟ ಮತದಾರರಿಗೆ ಪೋಸ್ಟಲ್ ಬ್ಯಾಲಟ್ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದು ಚುನಾವಣೆ ಕುರಿತು ಹೆಚ್ಚಿನ ಯಾವುದೇ ಮಾಹಿತಿಗೆ ವೆಬ್ಸೈಟ್ ಛಿeo ceo karnatakaka ನೋಡಬಹುದು ಎಂದರು.
ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ರಂಗೋಲಿ ಸ್ಪರ್ಧೆ ಹಾಗೂ ಜಾಥಾ, ಮಾನವ ಸರಪಳಿ ರಚಿಸುವ ಮೂಲಕ ಮತದಾನ ಜಾಗೃತಿ ಘೋಷಣೆಗಳನ್ನು ಕೂಗುವ ಮೂಲಕ ಮತದಾರರ ಜಾಗೃತಿ ಹಬ್ಬದಂತೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಚಂದ್ರಪ್ಪ ಸಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಂತೋಷ, ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ, ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು ಪಾಲ್ಗೊಂಡಿದ್ದರು.
(ಫೋಟೊ ಇದೆ)