ಶಿವಮೊಗ್ಗ, ಫೆಬ್ರವರಿ 08 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ವ್ಯಾಪ್ತಿಯ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಖುಷ್ಕಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ರೂ.98.000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1.20.000/- ಗಳ ಒಳಗಿರಬೇಕು. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ರೈತರು ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಿ.ಇ.ಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷಗಳ ಒಳಗಿನ, ವಾರ್ಷಿಕ ವರಮಾನ ರೂ. 3,50,000/- ಗಳ ಒಳಗಿರುವ, ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಫೆ.03 ರಿಂದ ಮಾ.03 ರವರೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://kssd.karnataka.gov.in ಅಥವಾ ದೂರವಾಣಿ ಸಂಖ್ಯೆ 080-22374832, 8050773004/5, 8050370006, 7090400100 ಅಥವಾ 7090400900 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

error: Content is protected !!