News Next

ಶಿವಮೊಗ್ಗ, ಮಾರ್ಚ್ 23 : ವಾಟ್ಸಾಪ್ ಮೂಲಕ ಕರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

     ಕುಂಸಿ ಪೆÇಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರ ಗ್ರಾಮದ ವಾಸಿ ನಾಗರಾಜ್ ತಮ್ಮ ವಾಟ್ಸಾಪ್ ಖಾತೆಯಿಂದ ಕರೋನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಇರುವ ಸಂದೇಶವನ್ನು ಬೇರೆ ಸಾರ್ವಜನಿಕರ ಮೊಬೈಲ್ ಗೆ ಕಳುಹಿಸಿ ಗೊಂದಲ ಉಂಟಾಗಲು ಕಾರಣರಾಗಿದ್ದಾರೆ. ಸಾರ್ವಜನಿಕರಲ್ಲಿ ಭೀತಿಯನ್ನು ಹುಟ್ಟಿಸಿ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿರುವ ಬಗ್ಗೆ ಕುಂಸಿ ಪೆÇಲೀಸ್ ಠಾಣೆಯಲ್ಲಿ ಕಲಂ 505(1) (ಬಿ) ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.

      ಸಾಮಾಜಿಕ ಜಾಲತಾಣಗಳಲ್ಲಿ ಬಗ್ಗೆ ಸುಳ್ಳು ಸುದ್ದಿ ಇರುವ ಸಂದೇಶವನ್ನು ಫಾರ್ವರ್ಡ್ ಮಾಡುವುದು ಕಾನೂನು  ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ಬಗ್ಗೆ ವಾಟ್ಸಪ್ ಗ್ರೂಪ್ ಅಡ್ಮಿನ್‍ಗಳು, ಬಳಕೆದಾರರು ಹಾಗೂ ವಿಡಿಯೋ ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು. ಯಾರಿಂದಲೋ ಬಂದಂತಹ ಸುಳ್ಳು ಸುದ್ದಿ ಇರುವ ಸಂದೇಶಗಳನ್ನು ಬೇರೆ ಗ್ರೂಪ್‍ಗಳಿಗೆ ಮರುಕಳುಹಿಸುವುದು ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್‍ಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಎಚ್ಚರಿಕೆ: ಕರೋನಾ ವೈರಸ್ ಬಗ್ಗೆ ಅನಧಿಕೃತ ಮೂಲಗಳಿಂದ ತಪ್ಪು ಮಾಹಿತಿಯನ್ನು ಪಡೆದು ವದಂತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಯಾರೂ ಕೂಡಾ ಸುಳ್ಳು ಮಾಹಿತಿಗಳನ್ನು ಫಾರ್ವರ್ಡ್ ಮಾಡಿ ವದಂತಿ ಹರಡಲು ಕಾರಣರಾಗಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

error: Content is protected !!